ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಮುಂದುವರಿದ ಭಾಗ ಎಂಬಂತೆ ಜನವರಿ 14 ರಿಂದ ಮಾರ್ಚ್ 20 ರವರೆಗೆ ಮಣಿಪುರದಿಂದ ಮುಂಬೈಗೆ 'ಭಾರತ್ ನ್ಯಾಯ ಯಾತ್ರೆ' ನಡೆಸಲು ಮುಂದಾಗಿದೆ
December 27, 2023
ಲೋಕಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ಕಾಂಗ್ರೆಸ್, ಸಂಸದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಮುಂದುವರಿದ ಭಾಗ ಎಂಬಂತೆ ಜನವರಿ 14 ರಿಂದ ಮಾರ್ಚ್ 20 ರವರೆಗೆ ಮಣಿಪುರದಿಂದ ಮುಂಬೈಗೆ 'ಭಾರತ್ ನ್ಯಾಯ ಯಾತ್ರೆ' ನಡೆಸಲು ಮುಂದಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು, ಕಾಂಗ್ರೆಸ್ ದೇಶಾದ್ಯಂತ ಸಂಘಟನೆ ನಡೆಸುತ್ತಿದೆ. ಮಣಿಪುರದಲ್ಲಾದ ಸಂಷರ್ಘ ಮತ್ತು ಪ್ರಾಣ ಹಾನಿಯ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಭಾರತ್ ನ್ಯಾಯ ಯಾತ್ರೆ ನಡೆಸಲಾಗುವುದು. ಇದರಲ್ಲಿ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಜನವರಿ 14ರಿಂದ ಮಾರ್ಚ್ 20ರವರೆಗೆ ಮಣಿಪುರದಿಂದ ಮುಂಬೈವರೆಗೆ ಭಾರತ್ ನ್ಯಾಯ ಯಾತ್ರೆ ನಡೆಸಲು ಎಐಸಿಸಿ ನಿರ್ಧರಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸುದ್ದಿಗೋಷ್ಠಿ ವೇಳೆ ಅಧಿಕೃತವಾಗಿ ಪ್ರಕಟಿಸಿದರು.
