ಸಲಾರ್ ಚಿತ್ರ ಮೊದಲ ದಿನ ಜಾಗತಿಕವಾಗಿ 175 ಕೋಟಿ ರೂಪಾಯಿಗೂ ಹೆಚ್ಚು ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿದೆ.

Waves of Karnataka

ಭಾರತೀಯ ಚಿತ್ರರಂಗದ ಬಹು ನಿರೀಕ್ಷೆಯ 'ಸಲಾರ್: ಭಾಗ ಒಂದು ಇಂದು ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು ಸಕಾರಾತ್ಮಕ ಪ್ರತಿಕ್ರಿಯೆಗಳು ಬಂದಿವೆ. ಇನ್ನು ಸಲಾರ್ ಚಿತ್ರ ಮೊದಲ ದಿನ ಜಾಗತಿಕವಾಗಿ 175 ಕೋಟಿ ರೂಪಾಯಿಗೂ ಹೆಚ್ಚು ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿದೆ.

ಇಂಡಸ್ಟ್ರಿ ಟ್ರ್ಯಾಕಿಂಗ್ ಸೈಟ್ Sacnilk ಪ್ರಕಾರ, ಭಾರತದಲ್ಲಿ ಚಿತ್ರ ಮುಂಗಡ ಮಾರಾಟದಲ್ಲಿ 49 ಕೋಟಿ ರೂಪಾಯಿ ಗಳಿಸಿದೆ. ಬಿಡುಗಡೆ ದಿನದಂದು ಅದು 60 ಕೋಟಿ ರೂಪಾಯಿಗಳನ್ನು ಗಳಿಸಲಿದೆ ಎಂದು ಈಗ ವರದಿಯಾಗಿದೆ. ಪ್ಯಾನ್-ಇಂಡಿಯಾ ಚಲನಚಿತ್ರದಲ್ಲಿ ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್ ಮತ್ತು ಶ್ರುತಿ ಹಾಸನ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

'ಸಲಾರ್' ಆಕ್ಷನ್ ಡ್ರಾಮಾ ಆಗಿದ್ದು, ಪ್ರಭಾಸ್ ಮತ್ತು ಪೃಥ್ವಿರಾಜ್ ಸುಕುಮಾರನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. 'ಕೆಜಿಎಫ್' ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರವು ಜಗತ್ತಿನಾದ್ಯಂತ ಬಹು ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಸಲಾರ್ ಬಿಡುಗಡೆಯ ದಿನದಂದು ಜಾಗತಿಕವಾಗಿ ಸುಮಾರು 180 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ವರದಿಯಾಗಿದೆ