2024ರ ಲೋಕಸಭೆ ಚುನಾವಣೆಗೆ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ನೇತೃತ್ವದ 16 ಸದಸ್ಯರ ಸಮಿತಿಯಲ್ಲಿ ಹಿರಿಯ ನಾಯಕರು, ಪಕ್ಷದ ಎರಡನೇ ಸಾಲಿನ ನಾಯಕರಿಗೆ ಸ್ಥಾನ ನೀಡಲಾಗಿದೆ

Waves of Karnataka

 


2024ರ ಲೋಕಸಭೆ ಚುನಾವಣೆಗೆ ಸಿದ್ಧತೆಗಳನ್ನು ಚುರುಕುಗೊಳಿಸಲು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ರಚಿಸಿದೆ. ಇದರಲ್ಲಿ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ನೇತೃತ್ವದ 16 ಸದಸ್ಯರ ಸಮಿತಿಯಲ್ಲಿ ಹಿರಿಯ ನಾಯಕರು, ಪಕ್ಷದ ಎರಡನೇ ಸಾಲಿನ ನಾಯಕರಿಗೆ ಸ್ಥಾನ ನೀಡಲಾಗಿದೆ.

ಛತ್ತೀಸ್‌ಗಢದ ಮಾಜಿ ಉಪಮುಖ್ಯಮಂತ್ರಿ ಟಿಎಸ್ ಸಿಂಗ್‌ದೇವ್ ಅವರನ್ನು ಚುನಾವಣಾ ಪ್ರಣಾಳಿಕೆ ಸಮಿತಿಯ ಸಂಚಾಲಕರನ್ನಾಗಿ ಮಾಡಲಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಶಶಿ ತರೂರ್, ಜೈರಾಮ್ ರಮೇಶ್, ಆನಂದ್ ಶರ್ಮಾ, ರಂಜಿತ್ ರಂಜನ್, ಜಿಗ್ನೇಶ್ ಮೇವಾನಿ ಸೇರಿದಂತೆ ಹಲವು ನಾಯಕರನ್ನು ಸಮಿತಿಯಲ್ಲಿ ಸೇರಿಸಲಾಗಿದೆ