ಭಾರತದ ಮುಖ್ಯ ನ್ಯಾಯಮೂರ್ತಿ (Chief Justice of India) ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಪೀಠವು ಸೋಮವಾರ ತೀರ್ಪು ಪ್ರಕಟಿಸಿತು. ಅವರು 370 ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರ 'ದುರುದ್ದೇಶಪೂರಿತ' ಎಂಬುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಹಿಂದಿನ ಜಮ್ಮು ಮತ್ತು ಕಾಶ್ಮೀರ (J&K) ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ವಿಧಿಯ ನಿಬಂಧನೆಗಳನ್ನು ಕೇಂದ್ರವು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ 23 ಅರ್ಜಿಗಳ ಮೇಲೆ ಐವರು ನ್ಯಾಯಾಧೀಶರನ್ನೊಳಗೊಂಡ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು ತನ್ನ ಮಹತ್ವದ ತೀರ್ಪನ್ನು ಇಂದು ಪ್ರಕಟಿಸಿತು.
