ಬಿಜೆಪಿ ದಲಿತ ಮತ್ತು ದಮನಿತ ವರ್ಗಗಳ ವಿರೋಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
December 14, 2023
ಬಿಜೆಪಿ ದಲಿತ ಮತ್ತು ದಮನಿತ ವರ್ಗಗಳ ವಿರೋಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.
ಮೇಲ್ಮನೆಯಲ್ಲಿ ಗುರುವಾರ ಪೂರಕ ಅಂದಾಜಿನ ಮೇಲಿನ ಚರ್ಚೆ ವೇಳೆ ವಿಪಕ್ಷಗಳಿಗೆ ತಿರುಗೇಟು ನೀಡಿದ ಅವರು, ಶೋಷಿತ ವರ್ಗಗಳ ಬಗ್ಗೆ ಬಿಜೆಪಿಗೆ ನಿಜವಾಗಿಯೂ ಕಾಳಜಿ ಇದ್ದರೆ, ಮಹತ್ವಾ ಕಾಂಕ್ಷಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾಯ್ದೆ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಜಾರಿಗೊಳಿಸಲು ಕೇಂದ್ರದ ಮೇಲೆ ಒತ್ತಡ ಹಾಕಲಿ ಎಂದು ಸವಾಲು ಹಾಕಿದರು.
ದೇಶದಲ್ಲಿ ತಮಿಳುನಾಡು ಹೊರತುಪಡಿಸಿದರೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆ ತಂದ ಏಕೈಕ ರಾಜ್ಯ ಕರ್ನಾಟಕ. ಈ ಕಾಯ್ದೆ ತಂದಿದ್ದು 2013ರ ಇದೇ ಬೆಳಗಾವಿ ಅಧಿವೇಶನದಲ್ಲಿ, ಇದೇ ಕಾಂಗ್ರೆಸ್ ಮತ್ತು ಇದೇ ಸಿದ್ದರಾಮಯ್ಯ. ಇದರಿಂದ ದಲಿತರ ಅಭಿವೃದ್ಧಿಗೆ ನೀಡುವ ಅನುದಾನ ಪ್ರಮಾಣ ನಾಲ್ಕೂವರೆ ಪಟ್ಟು ಹೆಚ್ಚಳ ಆಗಿದೆ. ಇದು ಅವಕಾಶ ವಂಚಿತ ಸಮುದಾಯಗಳ ಬಗ್ಗೆ ನಮ್ಮ ಬದ್ಧತೆಗೆ ಸಾಕ್ಷಿ. ನಿಮಗೂ (ಬಿಜೆಪಿಗೆ) ಬದ್ಧತೆ ಇದ್ದರೆ, ಉದ್ದೇಶಿತ ಕಾಯ್ದೆ ಜಾರಿಗೆ ಕೇಂದ್ರದ ಮೇಲೆ ಒತ್ತಡ ಹಾಕಿ ನೋಡೋಣ ಎಂದು ಸವಾಲು ಹಾಕಿದರು
Tags
.jpeg)