ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದವರು ಸ್ಪರ್ಧಿಸಲು ಮೂರು ಕ್ಷೇತ್ರಗಳ ಟಿಕೆಟ್ ನೀಡುವಂತೆ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದೇವೆಂದು ಸಚಿವ ಜಮೀರ್ ಅಹ್ಮದ್ ಖಾನ್
December 15, 2023
ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದವರು ಸ್ಪರ್ಧಿಸಲು ಮೂರು ಕ್ಷೇತ್ರಗಳ ಟಿಕೆಟ್ ನೀಡುವಂತೆ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದೇವೆಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶುಕ್ರವಾರ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಕೇಂದ್ರ ಸರ್ಕಾರದ ಬಗ್ಗೆ ಜನರು ಬದಲಾವಣೆ ಬಯಸಿದ್ದಾರೆ. ಕರ್ನಾಟಕ ಮಾತ್ರವಲ್ಲ ಇಡೀ ದೇಶದಲ್ಲಿ ಜನ ಬದಲಾವಣೆ ಬಯಸಿದ್ದಾರೆ. ಜನ ಈಗ ತೀರ್ಮಾನ ತೆಗೆದುಕೊಂಡು ಆಗಿದೆ. ರಾಜ್ಯದಲ್ಲಿ ಕನಿಷ್ಠ 25 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ಮೂರು ಕ್ಷೇತ್ರದಲ್ಲಿ ಮುಸ್ಲಿಂರಿಗೆ ಟಿಕೆಟ್ ಕೇಳಿದ್ದೇವೆ. ಬೆಂಗಳೂರು ಸೆಂಟ್ರಲ್, ಹಾವೇರಿ, ಬೀದರ್ ಕ್ಷೇತ್ರದ ಟಿಕೆಟ್ ಕೇಳಿದ್ದೇವೆ ಎಂದು ಹೇಳಿದರು.
Tags
