ದೇಶವಿರೋಧಿ ಚಟುವಟಿಕೆಗಳಿಂದಾಗಿ ಯುಎಪಿಎ ಅಡಿಯಲ್ಲಿ ಮುಸ್ಲಿಂ ಲೀಗ್ ಜಮ್ಮು ಮತ್ತು ಕಾಶ್ಮೀರ (ಮಸರತ್ ಆಲಂ ಗ್ರೂಪ್) ಸಂಘಟನೆಯನ್ನು ಅನ್ನು ಕೇಂದ್ರ ಸರ್ಕಾರ ನಿಷೇಧಿಸಿದ್ದು ಐದು ವರ್ಷಗಳ ಕಾಲ ನಿಷೇಧ ಇರಲಿದೆ.

Waves of Karnataka

 ದೇಶವಿರೋಧಿ ಚಟುವಟಿಕೆಗಳಿಂದಾಗಿ ಯುಎಪಿಎ ಅಡಿಯಲ್ಲಿ ಮುಸ್ಲಿಂ ಲೀಗ್ ಜಮ್ಮು ಮತ್ತು ಕಾಶ್ಮೀರ (ಮಸರತ್ ಆಲಂ ಗ್ರೂಪ್) ಸಂಘಟನೆಯನ್ನು ಅನ್ನು ಕೇಂದ್ರ ಸರ್ಕಾರ ನಿಷೇಧಿಸಿದ್ದು ಐದು ವರ್ಷಗಳ ಕಾಲ ನಿಷೇಧ ಇರಲಿದೆ.

ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ (ಮಸರತ್ ಆಲಂ ಬಣ)/ಎಂಎಲ್‌ಜೆಕೆ-ಎಂಎಯನ್ನು ಯುಎಪಿಎ ಅಡಿಯಲ್ಲಿ ಅಕ್ರಮ ಸಂಘಟನೆ ಎಂದು ಘೋಷಿಸಲಾಗಿದೆ ಎಂದು ಅಮಿತ್ ಶಾ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಈ ಸಂಘಟನೆ ಮತ್ತು ಅದರ ಸದಸ್ಯರು ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಾರೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ಜನರನ್ನು ಪ್ರಚೋದಿಸುತ್ತಾರೆ. ನಮ್ಮ ದೇಶದ ಏಕತೆ, ಸಮಗ್ರತೆ ಮತ್ತು ಸಾರ್ವಭೌಮತೆಗೆ ವಿರುದ್ಧವಾಗಿ ಕೆಲಸ ಮಾಡುವವರನ್ನು ಯಾವುದೇ ಬೆಲೆಗೆ ಉಳಿಸಲಾಗುವುದಿಲ್ಲ ಎಂಬುದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಂದೇಶವಾಗಿದೆ.