ರೋರಿಂಗ್‌ ಸ್ಟಾರ್‌ ಶ್ರೀಮುರಳಿಗೆ ಜನ್ಮದಿನದ ಸಂಭ್ರಮ. ಜನ್ಮದಿನದ ಅಂಗವಾಗಿ ಈಗಾಗಲೇ ಬಘೀರ ಟೀಸರ್‌ ಬಿಡುಗಡೆ ಆಗಿದ್ದು, ಮೆಚ್ಚುಗೆ ಪಡೆದಿದೆ. ಈ ನಡುವೆ ಇನ್ನೊಂದು ಹೊಸ ಸಿನಿಮಾದ ಫಸ್ಟ್‌ ಲುಕ್‌ ರಿಲೀಸ್‌ ಆಗಿದೆ.

Waves of Karnataka

 ರೋರಿಂಗ್‌ ಸ್ಟಾರ್‌ ಶ್ರೀಮುರಳಿಗೆ  ಜನ್ಮದಿನದ ಸಂಭ್ರಮ. ಜನ್ಮದಿನದ ಅಂಗವಾಗಿ ಈಗಾಗಲೇ ಬಘೀರ ಟೀಸರ್‌ ಬಿಡುಗಡೆ ಆಗಿದ್ದು, ಮೆಚ್ಚುಗೆ ಪಡೆದಿದೆ. ಈ ನಡುವೆ ಇನ್ನೊಂದು ಹೊಸ ಸಿನಿಮಾದ ಫಸ್ಟ್‌ ಲುಕ್‌ ರಿಲೀಸ್‌ ಆಗಿದೆ.

ಶ್ರೀ ಮುರಳಿ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾವೊಂದು ಘೋಷಣೆಯಾಗಿದೆ. ಯುವ ಪ್ರತಿಭೆಗಳ ಜೊತೆ ಶ್ರೀಮುರಳಿ ಕೈ ಜೋಡಿಸಿದ್ದಾರೆ. ರೋರಿಂಗ್ ಸ್ಟಾರ್ ಬರ್ತ್‌ಡೇಗೆ ಸ್ಪೆಷಲ್ ಆಗಿ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ನವ ನಿರ್ದೇಶಕ ಹಾಲೇಶ್ ಕೋಗುಂಡಿ ಸಾರಥ್ಯದ ಚಿತ್ರಕ್ಕೆ ಪರಾಕ್ ಎಂಬ  ಟೈಟಲ್ ಇಡಲಾಗಿದೆ.

ಒಂದಷ್ಟು ಕಿರು ಚಿತ್ರಗಳನ್ನು ನಿರ್ದೇಶಿಸಿರುವ ಅನುಭವವಿರುವ ಹಾಲೇಶ್, ಪರಾಕ್ ಸಿನಿಮಾ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಈ ಚಿತ್ರಕ್ಕಾಗಿ ಕ್ರಿಯೇಟರ್ ಹಾಗೂ ಡೈರೆಕ್ಟರ್ ಆಗಿರುವ ಹಾಲೇಶ್‌ಗೆ, ಮಂಜುನಾಥ್ ಬರವಣಿಗೆಯಲ್ಲಿ ಸಾಥ್ ಕೊಟ್ಟಿದ್ದಾರೆ. ಆಕ್ಷನ್ ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ಪರಾಕ್ ಸಿನಿಮಾವನ್ನು ಬ್ರ್ಯಾಂಡ್ ಕೋಆಪರೇಟ್ಸ್ ಪ್ರೊಡಕ್ಷನ್ ಪ್ರೈವೇಟ್ ಲಿಮಿಟೆಡ್ ನಡಿ ನಿರ್ಮಾಣ ಮಾಡಲಾಗುತ್ತಿದೆ. ಕೋಗುಂಡಿ ಅಖಿಲೇಶ್ ಹಾಗೂ ಆಶಿಕ್ ಮಾಡಾಲ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.