ತೆಲಂಗಾಣದ ನಿರ್ಗಮಿತ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಕನಸಿನ ಓಟಕ್ಕೆ ಕೊನೆಗೂ ತೆರೆ ಬಿದ್ದಿದೆ
December 04, 2023
ರಾಷ್ಟ್ರ ರಾಜಕಾರಣಕ್ಕೆ ಕಾಲಿಟ್ಟು ಎಚ್‌ಡಿ ದೇವೇಗೌಡರ ಮಾದರಿಯಲ್ಲಿ ಪ್ರಧಾನಿ ಹುದ್ದೆಯ ಕನಸು ಕಾಣುತ್ತಿದ್ದ ಅವರು ಇದೀಗ ಸಿಎಂ ಸ್ಥಾನವನ್ನೇ ಕಳೆದುಕೊಂಡಿದ್ದಾರೆ.
ಭಾನುವಾರ ನಡೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಮತ ಎಣಿಕೆಯಲ್ಲಿ ಕೆ ಚಂದ್ರಶೇಖರ್ ರಾವ್ ಅವರ ಭಾರತ್ ರಾಷ್ಟ್ರ ಸಮಿತಿ 119ರಲ್ಲಿ ಕೇವಲ 39 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಹೀನಾಯ ಸೋಲು ಕಂಡಿದೆ. ಚಂದ್ರಶೇಖರ್ ರಾವ್ ತಾವು ಸ್ಪರ್ಧಿಸಿದ್ದ ಎರಡು ಕ್ಷೇತ್ರಗಳಲ್ಲಿ ಒಂದರಲ್ಲಿ (ಕಾಮಾರೆಡ್ಡಿ) ಸೋಲು ಕಂಡಿದ್ದರೆ, ಇನ್ನೊಂದರಲ್ಲಿ ಗಜ್ವೇಲ್ ಗೆಲುವು ಸಾಧಿಸಿ ಮರ್ಯಾದೆ ಉಳಿಸಿಕೊಂಡಿದ್ದಾರೆ.
