ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದು, " ಜನತಾ ಜನಾರ್ದನ " ಎಂದು ನಮಸ್ಕರಿಸಿದ್ದಾರೆ

Waves of Karnataka


 ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದು, " ಜನತಾ ಜನಾರ್ದನ " ಎಂದು ನಮಸ್ಕರಿಸಿದ್ದಾರೆ. ಮಾತ್ರವಲ್ಲದೇ, ಭಾರತದ ಜನ ಉತ್ತಮ ಆಡಳಿತ, ಅಭಿವೃದ್ಧಿ ಪರ ರಾಜಕೀಯದ ಜತೆ ಇದ್ದಾರೆ ಎಂದು ಸಾಭೀತಾಗಿದೆ ಎಂದು ಮೋದಿ ಹೇಳಿದ್ದಾರೆ.

ಚುನಾವಣೆ ಫಲಿತಾಂಶಗಳ ಬಗ್ಗೆ ಭಾನುವಾರ ಸರಣಿ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, " ಜನತಾ ಜನಾರ್ದನನಿಗೆ ನಮಿಸುತ್ತೇನೆ. ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದ ಫಲಿತಾಂಶಗಳು ಭಾರತದ ಜನರು ಉತ್ತಮ ಆಡಳಿತ ಮತ್ತು ಅಭಿವೃದ್ಧಿಯ ರಾಜಕೀಯ ನೀಡುವ ಬಿಜೆಪಿ ಪಕ್ಷದ ಜತೆ ದೃಢವಾಗಿ ಇದ್ದಾರೆ ಎಂಬುದನ್ನು ಸೂಚಿಸುತ್ತದೆ " ಎಂದಿದ್ದಾರೆ