ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ವರದಿಯನ್ನು ಕಾಂಗ್ರೆಸ್ ಸರ್ಕಾರ ಅಂಗೀಕರಿಸಿರುವುದಕ್ಕೆ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ

Waves of Karnataka

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ವರದಿಯನ್ನು ಕಾಂಗ್ರೆಸ್ ಸರ್ಕಾರ ಅಂಗೀಕರಿಸಿರುವುದಕ್ಕೆ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ(ಅಲ್ಪಸಂಖ್ಯಾತ, ಹಿಂದುಳಿದ, ದಲಿತರು) ಸಮಾವೇಶ ಆಯೋಜಿಸುವ ಮೂಲಕ ಉತ್ತರ ನೀಡಲು ಸಜ್ಜಾಗಿದ್ದಾರೆ. ಜನವರಿ 28 ರಂದು ಚಿತ್ರದುರ್ಗದಲ್ಲಿ ಅಹಿಂದ ಸಮಾವೇಶ ನಡೆಯಲಿದೆ.

ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಸಮಾವೇಶದಲ್ಲಿ ಜಾತಿ ಆಧಾರಿತ ಸಾಮಾಜಿಕ-ಆರ್ಥಿಕ ಶೈಕ್ಷಣಿಕ ಸಮೀಕ್ಷಾ ವರದಿ ತಿರಸ್ಕರಿಸುವ ನಿರ್ಣಯ ಅಂಗೀಕರಿಸಿದ ಹಿನ್ನೆಲೆಯಲ್ಲಿ ‘ಶೋಷಿತರ ಜಾಗೃತಿ ಸಮಾವೇಶ’ ಹೆಚ್ಚು ಮಹತ್ವ ಪಡೆದುಕೊಂಡಿದೆ.