ಮೊದಲ ಬಾರಿಗೆ ನಿರ್ದೇಶಕನ ಜವಾಬ್ದಾರಿ ಹೊತ್ತಿದ್ದ ಉಮೇಶ್ ಕೆ ಕೃಪಾ ಅವರ ಟಗರು ಪಲ್ಯ ಸಿನಿಮಾ ಇದೀಗ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್‌ಗೆ ಲಭ್ಯವಿದೆ.

Waves of Karnataka


 ಇದೇ ಮೊದಲ ಬಾರಿಗೆ ನಿರ್ದೇಶಕನ ಜವಾಬ್ದಾರಿ ಹೊತ್ತಿದ್ದ ಉಮೇಶ್ ಕೆ ಕೃಪಾ ಅವರ ಟಗರು ಪಲ್ಯ ಸಿನಿಮಾ ಇದೀಗ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್‌ಗೆ ಲಭ್ಯವಿದೆ. ಕಾಮಿಡಿ ಎಂಟರ್‌ಟೈನರ್ ಚಿತ್ರದಲ್ಲಿ ನಟ ನಾಗಭೂಷಣ್ ಮತ್ತು ನಟ ಪ್ರೇಮ್ ಅವರ ಪುತ್ರಿ ಅಮೃತಾ ಪ್ರೇಮ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.

ಟಗರು ಪಲ್ಯ ಸಿನಿಮಾದಲ್ಲಿ ನಾಗಭೂಷಣ್ ಮತ್ತು ಅಮೃತಾ ಅವರಲ್ಲದೆ ತಾರಾ, ರಂಗಾಯಣ ರಘು ಮತ್ತು ಶರತ್ ಲೋಹಿತಾಶ್ವ ಕೂಡ ನಟಿಸಿದ್ದಾರೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜಿಸಿದ್ದು, ಅತಿಥಿ ಪಾತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಎಸ್‌ಕೆ ರಾವ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

ಟಗರು ಪಲ್ಯ ಅಕ್ಟೋಬರ್ 27 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿತ್ತು. ಸಕಾರಾತ್ಮಕ ವಿಮರ್ಶೆಗಳಿಗೆ ಪಾತ್ರವಾಗಿತ್ತು.