ಹೈಕೋರ್ಟ್‌/, "ಗುತ್ತಿಗೆದಾರರಿಂದ ಕೆಲಸ ಮಾಡಿಸಿಕೊಂಡ ಮೇಲೆ ಬಿಲ್ ಪಾವತಿಸಲು ತಕರಾರೇಕೆ? ಸರ್ಕಾರವೇ ನಾಗರಿಕರ ಮೊದಲ ಶತ್ರು ಎಂಬ ಮಾತು ಸತ್ಯ ಎಂಬುದಾಗಿ ಭಾಸವಾಗುತ್ತಿದೆ"

Waves of Karnataka


 ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸಲು ವಿಳಂಬ ಮಾಡುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಯ ಬಗ್ಗೆ ಮತ್ತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್‌, "ಗುತ್ತಿಗೆದಾರರಿಂದ ಕೆಲಸ ಮಾಡಿಸಿಕೊಂಡ ಮೇಲೆ ಬಿಲ್ ಪಾವತಿಸಲು ತಕರಾರೇಕೆ? ಸರ್ಕಾರವೇ ನಾಗರಿಕರ ಮೊದಲ ಶತ್ರು ಎಂಬ ಮಾತು ಸತ್ಯ ಎಂಬುದಾಗಿ ಭಾಸವಾಗುತ್ತಿದೆ" ಎಂದು ಮೌಖಿಕವಾಗಿ ಕಟುವಾಗಿ ನುಡಿದಿದೆ.

ನಿಕ್ಷೇಪ ಇನ್ಫ್ರಾ ಪ್ರಾಜೆಕ್ಟ್ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತು.

"ಗುತ್ತಿದಾರರಿಗೆ ಹಣ ಪಾವತಿಸಲು ಫೆಬ್ರವರಿಯವರೆಗೆ ಕಾವಲಾವಕಾಶ ನೀಡಬೇಕು ಎಂಬ ಸರ್ಕಾರಿ ವಕೀಲರ ಮನವಿಯನ್ನು ಆಕ್ಷೇಪಿಸಿದ ವಿಭಾಗೀಯ ಪೀಠವು ನಿಮ್ಮ (ಸರ್ಕಾರ) ನಡೆಯಿಂದ ಕೆಲಸ ಮಾಡಲು ಗುತ್ತಿಗೆದಾರರು ಹಿಂಜರಿಯುವ ಸ್ಥಿತಿ ಸೃಷ್ಟಿಸುತ್ತಿದ್ದೀರಿ. ನಿಮ್ಮ ನೀತಿಯಿಂದ ಟೆಂಡರ್ ಮೊತ್ತ ಹಲವು ಪಟ್ಟು ಹೆಚ್ಚಾಗಬಹುದು. ಸರ್ಕಾರಕ್ಕೆ ಇಂತಹ ಸಲಹೆ ನೀಡುತ್ತಿರುವರಾರು? ನಾವು ಕಾನೂನು ಪದವಿ ಓದುತ್ತಿದ್ದಾಗ ‘ಸರ್ಕಾರವೇ ನಾಗರಿಕರ ಮೊದಲ ಶತ್ರು’ ಎಂಬ ಮಾತು ಹೇಳಲಾಗುತ್ತಿತ್ತು. ಇದೀಗ ಈ ಮಾತು ಸತ್ಯ ಎಂಬ ಭಾವನೆ ಮೂಡುತ್ತಿದೆ" ಎಂದಿತು.


.