ಮುಂದಿನ ವರ್ಷ ರಷ್ಯಾಗೆ ಭೇಟಿ ನೀಡುವಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದಾರೆ

Waves of Karnataka


 ಮುಂದಿನ ವರ್ಷ ರಷ್ಯಾಗೆ ಭೇಟಿ ನೀಡುವಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದು, ಇದು ಎಲ್ಲಾ ಪ್ರಸ್ತುತ ವಿಷಯಗಳ ಕುರಿತು ಚರ್ಚಿಸಲು ಮತ್ತು ದ್ವಿಪಕ್ಷೀಯ ಸಂಬಂಧ ವೃದ್ಧಿಯ ಬಗ್ಗೆ ಮಾತನಾಡಲು ಅವಕಾಶ ಕಲ್ಪಿಸುತ್ತದೆ ಎಂದು ಹೇಳಿದ್ದಾರೆ.

"ನಮ್ಮ ಸ್ನೇಹಿತ ಪ್ರಧಾನಿ ಮೋದಿಯನ್ನು ರಷ್ಯಾದಲ್ಲಿ ನೋಡಲು ನಾವು ಸಂತೋಷಪಡುತ್ತೇವೆ" ಎಂದು ಪುಟಿನ್ ಅವರು ಕ್ರೆಮ್ಲಿನ್‌ನಲ್ಲಿ ತಮ್ಮನ್ನು ಭೇಟಿ ಮಾಡಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಹೇಳಿದ್ದಾರೆ.