ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಗುವ ಸಾಧ್ಯತೆ ದಟ್ಟವಾಗಿದೆ.
December 11, 2023
ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಆರ್.ಆರ್ ನಗರ ಪೊಲೀಸರು ನಟ ದರ್ಶನ್‌ಗೆ ಕ್ಲೀನ್ ಚಿಟ್ ಕೊಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ದರ್ಶನ್ ಮನೆಯ ನಾಯಿ ವೈದ್ಯೆ ಅಮಿತಾ ಜಿಂದಾಲ್ ಅವರಿಗೆ ಕಚ್ಚಿತ್ತು. ಈ ಸಂಬಂಧ ಮಹಿಳೆ ನಟ ದರ್ಶನ್ ಹಾಗೂ ಮನೆ ಕೆಲಸದವನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಪ್ರಕರಣದಲ್ಲಿ ಆರೋಪಿಗಳಾಗಿದ್ದ ದರ್ಶನ್ ಹಾಗೂ ಮನೆ ಕೆಲಸದವನಿಗೆ ನೋಟಿಸ್ ಕೊಟ್ಟು ವಿಚಾರಣೆ ಮಾಡಿ ಘಟನೆ ಬಗ್ಗೆ ಇಬ್ಬರ ಬಳಿ ಆರ್.ಆರ್ ನಗರ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದರು. ಈಗ ಚಾರ್ಜ್ ಶೀಟ್ ಸಲ್ಲಿಸಲು ಆರ್.ಆರ್ ನಗರ ಪೊಲೀಸರು ತಯಾರಿ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ದರ್ಶನ್ ಪಾತ್ರ ಕಂಡು ಬರದ ಹಿನ್ನೆಲೆಯಲ್ಲಿ ದರ್ಶನ್ ಹೆಸರು ಕೈಬಿಟ್ಟು ಚಾರ್ಜ್‌ಶೀಟ್ ಸಲ್ಲಿಸಲು ಪೊಲೀಸರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
