ಇಬ್ಬರು ಅಪರಿಚಿತ ವ್ಯಕ್ತಿಗಳು ಲೋಕಸಭೆ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿದ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಬುಧವಾರ ಆದೇಶಿಸಿದೆ.
December 13, 2023
ಸಂಸತ್ತಿನಲ್ಲಿ ಬುಧವಾರ ಭಾರೀ ಭದ್ರತಾ ಲೋಪವಾಗಿದ್ದು, ಇಬ್ಬರು ಅಪರಿಚಿತ ವ್ಯಕ್ತಿಗಳು ಲೋಕಸಭೆ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿದ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಬುಧವಾರ ಆದೇಶಿಸಿದೆ.
'ಲೋಕಸಭಾ ಸಚಿವಾಲಯದ ಕೋರಿಕೆಯ ಮೇರೆಗೆ, ಸಂಸತ್ತಿನ ಭದ್ರತಾ ಲೋಪ ಘಟನೆಯ ಬಗ್ಗೆ ತನಿಖೆಗೆ MHA ಆದೇಶಿಸಿದೆ. ಸಿಆರ್‌ಪಿಎಫ್‌ನ ಡಿಜಿ ಅನೀಶ್ ದಯಾಳ್ ಸಿಂಗ್ ನೇತೃತ್ವದಲ್ಲಿ ಇತರ ಭದ್ರತಾ ಸಂಸ್ಥೆಗಳ ಸದಸ್ಯರು ಮತ್ತು ತಜ್ಞರೊಂದಿಗೆ ವಿಚಾರಣಾ ಸಮಿತಿ ರಚಿಸಲಾಗಿದೆ' ಎಂದು ಕೇಂದ್ರ ಗೃಹ ಸಚಿವಾಲಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.
Tags
