ಬಚ್ಚನ್ ಮನೆಯಿಂದ ಐಶ್ವರ್ಯಾ ಬಚ್ಚನ್ ತಮ್ಮ ಮಗಳೊಂದಿಗೆ ಹೊರ ಬಂದಿದ್ದಾರೆ ಎಂದು ಸುದ್ದಿಯಾಗಿದೆ.
December 15, 2023
ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ದಾಂಪತ್ಯದಲ್ಲಿ ನಡೆಯುತ್ತಿರುವ ಬಿರುಕಿನ ಸುದ್ದಿಯ ಗಾಸಿಪ್ ಇದೀಗ ನಿಜವಾಗುತ್ತಿದೆ ಎಂದು ಹೇಳಲಾಗಿದ್ದು. ಬಚ್ಚನ್ ಮನೆಯಿಂದ ಐಶ್ವರ್ಯಾ ಬಚ್ಚನ್ ತಮ್ಮ ಮಗಳೊಂದಿಗೆ ಹೊರ ಬಂದಿದ್ದಾರೆ ಎಂದು ಸುದ್ದಿಯಾಗಿದೆ.
ಜೂಮ್ ವೆಬ್ ಸೈಟ್ ವರದಿ ಪ್ರಕಾರ ಐಶ್ವರ್ಯಾ ರೈ ತನ್ನ ಮಗಳು ಆರಾಧ್ಯ ಬಚ್ಚನ್ ನೊಂದಿಗೆ ಬಚ್ಚನ್ ಮನೆ ಜಲ್ಸಾದಿಂದ ಹೊರಗೆ ಬಂದಿದ್ದಾರೆ. ಇದೀಗ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಮಾಧ್ಯಮಗಳ ವರದಿಯ ಪ್ರಕಾರ, ಐಶ್ವರ್ಯಾ ಮತ್ತು ಅವರ ಅತ್ತೆ ಜಯಾ ಬಚ್ಚನ್ ಕಳೆದ ಕೆಲವು ವರ್ಷಗಳಿಂದ ಯಾವುದೇ ರೀತಿಯ ಮಾತುಕತೆ ಇಲ್ಲದೆ ದೂರವಿದ್ದಾರೆ.ಆದರೆ ಅಭಿಷೇಕ್ ತನ್ನ ಹೆತ್ತವರಿಗೆ ನಿಷ್ಠೆ ಮತ್ತು ತನ್ನ ಹೆಂಡತಿ ಮತ್ತು ಮಗಳ ಬಗೆಗಿನ ಜವಾಬ್ದಾರಿಗಳನ್ನು ನಿಭಾಯಿಸುವ ಮೂಲಕ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.
Tags
