ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮಗಳು ಚಿತ್ರರಂಗಕ್ಕೆ ನಿರ್ಮಾಪಕಿಯಾಗಿ ಕಾಲಿರಿಸಿದ್ದಾರೆ

Waves of Karnataka

 


ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮಗಳು ನಿವೇದಿತಾ ಶಿವರಾಜ್‌ಕುಮಾರ್ ಚಿತ್ರರಂಗಕ್ಕೆ ಕಾಲಿರಿಸಿದ್ದಾರೆ. ನಟಿಯಾಗಿ ಅಲ್ಲ ಬದಲಿಗೆ ನಿರ್ಮಾಪಕಿಯಾಗಿ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಶ್ರೀ ಮುತ್ತು ಸಿನಿ ಸರ್ವೀಸ್‌ ಆರಂಭಿಸಿ ಸಿನಿಮಾಗಳನ್ನು ಮಾಡಲು ಮುಂದಾಗಿದ್ದಾರೆ.

ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’  ಸಿನಿಮಾವನ್ನು ವಂಶಿ ಕೃಷ್ಣ ಶ್ರೀನಿವಾಸ್ ನಿರ್ದೇಶಿಸುತ್ತಿದ್ದಾರೆ, ಮಗಳ ಚಿತ್ರದಲ್ಲಿ ಶಿವರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.