ಶಾಲೆ ಆಯ್ತು, ಇದೀಗ ರಾಜಭವನಕ್ಕೂ ಬಂದ ಬಾಂಬ್ ಬೆದರಿಕೆ ಕರೆ: ಸ್ಥಳಕ್ಕೆ ಪೊಲೀಸರ ದೌಡು, ತನಿಖೆ ಚುರುಕು
December 11, 2023
ಬೆಂಗಳೂರಿನ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ನಿಗೂಢ ತಾಣದಿಂದ ಈಮೇಲ್ ಮಾಡಿ ಭಾರಿ ಆತಂಕಕ್ಕೆ ಕಾರಣವಾದ ಘಟನೆ ಬೆನ್ನಲ್ಲೇ ಇದೀಗ ರಾಜ್ಯದ ಶಕ್ತಿ ಕೇಂದ್ರಗಳಲ್ಲಿ ಒಂದಾದ ರಾಜ ಭವನಕ್ಕೂ ಬಾಂಬ್ ಬೆದರಿಕೆ ಕರೆ ಬಂದಿದೆ.
ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು ಸೋಮವಾರ ರಾತ್ರಿ ಕರೆ ಮಾಡಿ ತಿಳಿಸಲಾಗಿದೆ. ರಾತ್ರಿ 11.30ರ ಸುಮಾರಿಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ವ್ಯಕ್ತಿಯೊಬ್ಬ ಹೇಳಿದ್ದಾನೆಂದು ತಿಳಿದುಬಂದಿದೆ.
ಬೆದರಿಕೆ ಕರೆ ಬಂದ ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಕೂಡಲೇ ಪೊಲೀಸರು ಬಾಂಬ್ ಸ್ಕ್ವಾಡ್ ಮತ್ತು ಡಾಗ್ ಸ್ಕ್ವಾಡ್‌ನೊಂದಿಗೆ ಅಲ್ಲಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ
Tags
