ಜಾರ್ಖಂಡ್‌ನ ಕಾಂಗ್ರೆಸ್ ಸಂಸದ ಧೀರಜ್ ಪ್ರಸಾದ್ ಸಾಹು ಮೇಲಿನ IT ದಾಳಿಯ ವಿಷಯವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
December 10, 2023
ಜಾರ್ಖಂಡ್‌ನ ಕಾಂಗ್ರೆಸ್ ಸಂಸದ ಧೀರಜ್ ಪ್ರಸಾದ್ ಸಾಹು ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ 200 ಕೋಟಿ ರೂ. ಗೂ ಅಧಿಕ ಲೆಕ್ಕಕ್ಕೆ ಸಿಗದಷ್ಟು ನಗದು ವಶಪಡಿಸಿಕೊಂಡ ಹಿನ್ನೆಲೆಯಲ್ಲಿ, ಕೇಂದ್ರವು ಕೇವಲ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡಿದೆ ಹೊರತು ಬಿಜೆಪಿಯನ್ನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಜಾರ್ಖಂಡ್ ಮತ್ತು ಒಡಿಶಾದಲ್ಲಿ ರಾಜ್ಯಸಭಾ ಸಂಸದ ಧೀರಜ್ ಸಾಹುಗೆ ಸಂಬಂಧಿಸಿರುವ ಸ್ಥಳಗಳ ಮೇಲೆ ಇತ್ತೀಚೆಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಬಗ್ಗೆ ಅವರು ಪ್ರತಿಕ್ರಿಯಿಸಿದರು.
'ಅವರು (ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ) ಕೇವಲ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡಿದ್ದಾರೆ. ಅವರು ಬಿಜೆಪಿ ನಾಯಕರ ಮೇಲೂ ದಾಳಿ ಮಾಡಲಿ. ಆಗ ಮಾತ್ರ ಅವರ ಬಳಿ ಎಷ್ಟು (ಅಕ್ರಮ ಸಂಪತ್ತು) ಇದೆ ಎಂದು ತಿಳಿಯುತ್ತದೆ' ಎಂದು ಸುದ್ದಿಗಾರರಿಗೆ ತಿಳಿಸಿದರು
Tags
