ಸಿಎಂ ವಿರುದ್ಧದ ಪ್ರಾಸಿಕ್ಯೂಷನ್; ವಾದ ಆಲಿಸಿ ಸೆ.2ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
August 31, 2024
ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಸಂಬಂಧ ವಾದ ಆಲಿಸಿದ ಹೈಕೋರ್ಟ್ ಸೆ.2ಕ್ಕೆ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿದೆ. ಮುಡಾ ಹಗರಣದಲ್ಲಿ (Muda Scam) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯು ವಾದ ಮಂಡನೆ ಬಳಿಕ ಶನಿವಾರ (ಆ.31) ಮಧ್ಯಾಹ್ನ 2:30ಕ್ಕೆ ಮುಂದೂಡಿಕೆಯಾಗಿತ್ತು. ಶನಿವಾರ ಬೆಳಗ್ಗೆ 10:30ಕ್ಕೆ ಶುರುವಾಗಿದ್ದ ವಿಚಾರಣೆಯಲ್ಲಿ ಸಿಎಂ ವಿರುದ್ಧದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ವಿವೇಚನೆ ಬಳಸಿಯೇ ಅನುಮತಿ ನೀಡಲಾಗಿದೆ ಎಂದು ವಕೀಲ ತುಷಾರ ಮೆಹ್ತಾ ವಾದ ಮಂಡಿಸಿದ್ದರು. ಬಳಿಕ ಸ್ನೇಹಮಯಿಕೃಷ್ಣ ಪರ ಹಿರಿಯ ವಕೀಲ ಮಣೀಂಧರ್ ಸಿಂಗ್ ವಾದ ಆರಂಭಿಸಿ, ಸರ್ಕಾರದ ಬದಲು ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಯಬೇಕಿದ್ದು ಮನವಿ ಮಾಡಿದರು. ಮಣೀಂದರ್ ಸಿಂಗ್ ಮುಂದಿನ ವಾದ ಸೋಮವಾರ ಮಂಡಿಸುವುದಾಗಿ ಮನವಿ ಮಾಡಿದಾಗ, ವಿಚಾರಣೆಯನ್ನೂ ಶನಿವಾರ ಮಧ್ಯಾಹ್ನ 2.30 ಕ್ಕೆ ಮುಂದೂಡಿತು. ಮಧ್ಯಾಹ್ನದ ನಂತರ ಪ್ರತಿವಾದಿ ಪ್ರದೀಪ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಅಬ್ರಹಾಂ ಪರ ವಕೀಲ ರಂಗನಾಥ ರೆಡ್ಡಿ ವಾದ ಮಂಡಿಸಿದ್ದರು.
Tags
