ಬಿಎಸ್‌ಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಯಾವತಿ ಮರು ಆಯ್ಕೆ

Waves of Karnataka


 ಬಹುಜನ ಸಮಾಜ ಪಾರ್ಟಿ (Bahujan Samaj Party)ಯ ರಾಷ್ಟ್ರೀಯ ಅಧ್ಯಕ್ಷರಾಗಿ ಹಿರಿಯ ನಾಯಕಿ ಮಾಯಾವತಿ (Mayawati) ಮರು ಆಯ್ಕೆಯಾಗಿದ್ದಾರೆ. ಬಿಎಸ್‌ಪಿ ಕೇಂದ್ರ ಕಾರ್ಯಕಾರಿ ಸಮಿತಿ (Central Executive Committee), ರಾಷ್ಟ್ರೀಯ ಮಟ್ಟದ ಹಿರಿಯ ಪದಾಧಿಕಾರಿಗಳು, ರಾಜ್ಯ ಪಕ್ಷದ ಘಟಕಗಳು ಮತ್ತು ದೇಶಾದ್ಯಂತ ಆಯ್ಕೆಯಾದ ಪ್ರತಿನಿಧಿಗಳ ವಿಶೇಷ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

68 ವರ್ಷದ ಮಾಯಾವತಿ ನಾಲ್ಕು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ಬಿಎಸ್‌ಪಿ ಸಂಸ್ಥಾಪಕ ಕಾನ್ಶಿರಾಮ್ ಎರಡು ದಶಕಗಳ ಹಿಂದೆ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸಿದ್ದರು