ಇನ್ಮುಂದೆ ಬಳ್ಳಾರಿ ಜೈಲಿನಲ್ಲಿ ಮುದ್ದೆ ಮುರಿಯುವ ನಟ ದರ್ಶನ್

Waves of Karnataka


 ನಟ ದರ್ಶನ್ (Actor Darshan) ಇನ್ನು ಮುಂದೆ ಬಳ್ಳಾರಿ ಜೈಲಿನಲ್ಲಿ (bellary jail) ಮುದ್ದೆ ಮುರಿಯಲಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Chitradurga Renukaswamy murder case) ಆರೋಪಿಯಾಗಿರುವ ದರ್ಶನ್ ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ (Parappana Agrahara Jail) ಬುಧವಾರ ಬಳ್ಳಾರಿ ಸೆಂಟ್ರಲ್ ಜೈಲ್ ಗೆ ಸ್ಥಳಾಂತರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲು ಸುತ್ತಮುತ್ತ ಮತ್ತು ಜೈಲು ಸಂಪರ್ಕದ ರಸ್ತೆಗಳ ಬದಿ ಭಾರಿ ಭದ್ರತೆ ಕೈಗೊಳ್ಳಲಾಗುತ್ತಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಎ2 ಆರೋಪಿ ನಟ ದರ್ಶನಗೆ ರಾಜಾತಿಥ್ಯ ಹಿನ್ನೆಲೆಯಲ್ಲಿ ಕೊಲೆ ಪ್ರಕರಣದ ಆರೋಪಿಗಳನ್ನು ರಾಜ್ಯದ ಬೇರೆಬೇರೆ ಜೈಲುಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಬುಧವಾರ ಮಧ್ಯಾಹ್ನ ಬಳಿಕ ದರ್ಶನ್ ನನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ.