ಚನ್ನಪಟ್ಟಣದ ಅಭ್ಯರ್ಥಿ ನಾನೇ: ಡಿಸಿಎಂ ಡಿ.ಕೆ. ಶಿವಕುಮಾರ್

Waves of Karnataka


 ಚನ್ನಪಟ್ಟಣದ ಅಭ್ಯರ್ಥಿ ನಾನೇ. ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿ ಆದರೂ ನನಗೆ ಮತ ಹಾಕಿದಂತೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ (DK Shivakumar) ಪುನರುಚ್ಚರಿಸಿದರು.

ಚನ್ನಪಟ್ಟಣ ಉಪ ಚುನಾವಣೆ ಸಂಬಂಧ ಬಿಜೆಪಿ, ಜೆಡಿಎಸ್ ಪಕ್ಷಗಳು ಚರ್ಚೆ ನಡೆಸಿರುವ ಬಗ್ಗೆ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಶುಕ್ರವಾರ ಮಾತನಾಡಿದ ಅವರು, “ಬಿ ಫಾರಂ ಬರೆವುದು, ಅದಕ್ಕೆ ಸಹಿ ಹಾಕುವುದು ನಾನು. ನಿಮ್ಮನ್ನು (ಮಾಧ್ಯಮದವರನ್ನು) ನಿಲ್ಲಿಸಿದರೂ ನನಗೆ ಓಟು” ಎಂದು ಹೇಳಿದರು.

ಎರಡು ವಿರೋಧ ಪಕ್ಷಗಳು ಒಂದಾಗಿವೆ ಎಂದು ಕೇಳಿದಾಗ “ಒಂದು, ಎರಡು, ಮೂರಾದರೂ ಆಗಲಿ ನಮಗೆ ಅದು ಸಂಬಂಧವಿಲ್ಲ. ನಾವು ಜನಸೇವೆ ಮಾಡುತ್ತೇವೆ, ಅದರ ಮೇಲೆ ಮಿಕ್ಕಿದ್ದನ್ನು ಜನರ ತೀರ್ಮಾನಕ್ಕೆ ಬಿಟ್ಟಿದ್ದು” ಎಂದರು.