ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್; ಸೆ.9ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

Waves of Karnataka


 ಮುಂದಿನ ಸೋಮವಾರದವರೆಗೂ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಮುಡಾ ಹಗರಣದಲ್ಲಿ (Muda Scam) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯು ಸೆ.9ಕ್ಕೆ ಮುಂದೂಡಿಕೆಯಾಗಿದೆ. ಕಳೆದ ವಿಚಾರಣೆಯಲ್ಲಿ ರಾಜ್ಯಪಾಲರ ಪರವಾಗಿ ವಕೀಲ ತುಷಾರ ಮೆಹ್ತಾ , ಸ್ನೇಹಮಯಿ‌ಕೃಷ್ಣ ಪರ ಹಿರಿಯ ವಕೀಲ‌ ಮಣೀಂಧರ್ ಸಿಂಗ್ ಹಾಗೂ ಪ್ರದೀಪ್‌ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಅಬ್ರಹಾಂ ಪರ ವಕೀಲ ರಂಗನಾಥ ರೆಡ್ಡಿ ವಾದ ಮಂಡಿಸಿದ್ದರು. ಸುದೀರ್ಘ ವಾದ ಆಲಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಸೋಮವಾರ (ಸೆ.2) ಮಧ್ಯಾಹ್ನಕ್ಕೆ ಮುಂದೂಡಿತ್ತು.


ಇಂದು ಸೋಮವಾರ (ಸೆ.2) ಮತ್ತೆ ಪ್ರತಿವಾದಿಗಳ ಪರ ಕೆಲ ವಕೀಲರಿಂದ ವಾದ ಮಂಡನೆ ಮಾಡಲಾಯಿತು. ಸಿಎಂ ಸಿದ್ದರಾಮಯ್ಯ ಪರ ವಕೀಲ ರವಿವರ್ಮ ಕುಮಾರ್ ಆಗಮಿಸಿದ್ದರು. ದೂರದಾರ ಸ್ನೇಹಮಯಿ‌ಕೃಷ್ಣ ಪರ ಹಿರಿಯ ವಕೀಲ ಕೆ.ಜಿ ರಾಘವನ್‌ ವಾದ ಆರಂಭಿಸಿದ್ದರು. 17A ಸಂಬಂಧಿಸಿದಂತೆ ಅನುಮತಿ ಬೇಕೋ, ಬೇಡವೋ ಎಂಬುದರ ಬಗ್ಗೆ ಹಿರಿಯ ವಕೀಲ ಕೆ.ಜಿ ರಾಘವನ್‌ ವಾದ ಮಂಡನೆ ಮಾಡಿದರು. 17-A ಮೇಲೆ ಪ್ರಾಸಿಕ್ಯೂಷನ್‌ಗೆ ಕೊಡುವಾಗ ಪ್ರಕರಣದ ಗಂಭೀರತೆ ಮತ್ತು ದಾಖಲೆ ಇದ್ದರೆ ಸಾಕು, ಪೊಲೀಸ್‌ ಅಧಿಕಾರಿಗಳು ಯಾವುದೇ ಮನವಿ ಕೂಡಾ ಸಲ್ಲಿಸುವ ಅಗತ್ಯವಿಲ್ಲ. ಈ ಪ್ರಕರಣದಲ್ಲಿ ಕೆಲ ತಪ್ಪುಗಳು ಆಗಿವೆ