ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ- ಆರ್‌ವಿ ದೇಶಪಾಂಡೆ ಅಚ್ಚರಿ ಹೇಳಿಕೆ

Waves of Karnataka


 ಸಿಎಂ ಸಿದ್ದರಾಮಯ್ಯ (CM Siddaramaiah) ಮುಡಾ (MUDA Case) ವಿಚಾರವಾಗಿ ತಪ್ಪೇ ಮಾಡಿಲ್ಲ ಅಂತ ಹೇಳುತ್ತಲೇ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ ದೇಶಪಾಂಡೆ (RV Deshpande) ಪರೋಕ್ಷವಾಗಿ ಸಿಎಂಗೆ ಟಾಂಗ್ ನೀಡಿದ್ರಾ ಎಂಬ ಗುಮಾನಿ ಎದ್ದಿದೆ. ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ ಎಂದಿದ್ದಾರೆ. ಫೋನ್ ಟ್ಯಾಪಿಂಗ್‌ ಆರೋಪ ಬಂದಾತಕ್ಷಣ ರಾಮಕೃಷ್ಣ ಹೆಗೆಡೆ ರಾಜೀನಾಮೆ ನೀಡಿದ್ದರು. ಈಗ ದಿನ ಫೋನ್ ಟ್ಯಾಪ್ ನಡೀತಾ ಇದೆ, ಆದರೆ ಮೌಲ್ಯಾಧಾರಿತ ರಾಜಕಾರಣ ಈಗ ನಡೆಯುತ್ತಿಲ್ಲ ಎಂದು ಮೈಸೂರಿನಲ್ಲಿ ಪ್ರಸ್ತುತ ರಾಜಕಾರಣದ ಬಗ್ಗೆ ಬೇಸರ ವ್ಯಕ್ತ ಪಡಿಸಿದರು.

ಹಿಂದೆ ಮೌಲ್ಯಾಧಾರಿತ ರಾಜಕಾರಣ ಮಾಡುತ್ತಿದ್ದರು, ಅದೇ ರೀತಿ ನಡೆದುಕೊಳ್ಳುತ್ತಿದ್ದರು. ರಾಮಕೃಷ್ಣ ಹೆಗೆಡೆ ಮತ್ತು ವಿವೇಕಾನಂದರ ಬಗ್ಗೆ ಹೊಗಳುತ್ತಾಲೇ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಆರ್.ವಿ. ದೇಶಪಾಂಡೆ ವ್ಯಂಗ್ಯ ಮಾಡಿದ್ದಂತೆ ಇತ್ತು. ಮುಡಾ ವಿಚಾರದಲ್ಲಿ ಸಿಎಂ ಏನು ತಪ್ಪು ಮಾಡಿದ್ದಾರೆ. ಸಾವಿರಾರು ಕೋಟಿ ರೂ. ಹಗರಣ ಅಂಥ ಹೇಳುತ್ತಿದ್ದಾರೆ. ಆರೋಪದ ಬಗ್ಗೆ ದಾಖಲೆ ಕೊಡಿ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದರು. ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುತ್ತೇನೆ ಎಂದು ಮೈಸೂರಿನಲ್ಲಿ ಅಚ್ಚರಿ ಹೇಳಿಕೆ ಕೊಟ್ಟು ಪರೋಕ್ಷವಾಗಿ ಸಿಎಂ ಆಗುವ ಆಸೆ ಬಿಚ್ಚಿಟ್ಟರು.