ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ನ್ಯಾಯಾಲಯದ ಆದೇಶದ ಮೇರೆಗೆ ಪ್ರಥಮ ಮಾಹಿತಿ ವರದಿ (FIR) ದಾಖಲಿಸಿದ್ದಾರೆ.
ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರು ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲಾಗಿದೆ.
