ಮೋದಿಯನ್ನು ಅಧಿಕಾರದಿಂದ ಇಳಿಸೋವರೆಗೂ ನಾನು ಸಾಯೊಲ್ಲ' ಎಂದಿದ್ದ Kharge ಆರೋಗ್ಯ ವಿಚಾರಿಸಿದ ಪ್ರಧಾನಿ, 'ಅನಗತ್ಯ' ಎಂದ ಅಮಿತ್ ಶಾ!

Waves of Karnataka


 ನರೇಂದ್ರ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಸಾಯುವುದಿಲ್ಲ ಎಂದು ಹೇಳಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದ ಕುರಿತು ಪ್ರಧಾನಿ ಮೋದಿ ವಿಚಾರಿಸಿದ್ದಾರೆ.


ಜಮ್ಮು ಕಾಶ್ಮೀರದಲ್ಲಿ ನಿನ್ನೆ ಚುನಾವಣಾ ಸಮಾವೇಶದಲ್ಲಿ ಮಾತನಾಡುತ್ತಿದ್ದಾಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದರು. ಆದರೆ ತಕ್ಷಣವೇ ಸಾವರಿಸಿಕೊಂಡು ಮಾತು ಮುಂದುವರಿಸಿದ ಮಲ್ಲಿಕಾರ್ಜುನ ಖರ್ಗೆ, ನಾನು ಇಷ್ಟು ಬೇಗ ಸಾಯಲ್ಲ, ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಿಯೇ ಸಾಯುವುದು ಎಂದು ಹೇಳಿದ್ದರು. ಅವರ ಈ ಹೇಳಿಕೆ ವೈರಲ್ ಆಗಿತ್ತು

ಇನ್ನು ಇದೇ ವಿಚಾರವಾಗಿ ಕಿಡಿಕಾರಿರುವ ಕೇಂದ್ರ ಸಚಿವ ಅಮಿತ್ ಶಾ, ಮಲ್ಲಿಕಾರ್ಜುನ ಖರ್ಗೆ ತಮ್ಮ ವೈಯಕ್ತಿಕ ಆರೋಗ್ಯ ವಿಚಾರದಲ್ಲಿ ಅನಗತ್ಯವಾಗಿ ನರೇಂದ್ರ ಮೋದಿ ಅವರನ್ನು ಎಳೆದು ತರುತ್ತಿದ್ದಾರೆ. ಖರ್ಗೆ ಅವರ ಇಂದು ತಮ್ಮ ಭಾಷಣದಲ್ಲಿ ಸಂಪೂರ್ಣ ಅನಗತ್ಯ ವಿಚಾರಗಳನ್ನು ಎತ್ತಿದ್ದಾರೆ. ಇದು ಅವರ ದ್ವೇಷ ಪ್ರದರ್ಶನ ಮಾಡುತ್ತದೆ. ಇದು ಪ್ರಧಾನಿ ಮೋದಿಯವರ ಬಗ್ಗೆ ಕಾಂಗ್ರೆಸ್ ಹೊಂದಿರುವ ದ್ವೇಷ ಮತ್ತು ಭಯವನ್ನು ತೋರಿಸುತ್ತದೆ. ಅವರು ನಿರಂತರವಾಗಿ ಮೋದಿ ಅವರ ಬಗ್ಗೆಯೇ ಯೋಚಿಸುತ್ತಿದ್ದಾರೆ ಎಂದು ಹೇಳಿದರು.