ಈ ವರ್ಷ ಅತಿವೃಷ್ಟಿಯಿಂದ 25 ಮಂದಿ ಸಾವು; 1,05,937 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ: ಸಿಎಂ ಸಿದ್ದರಾಮಯ್ಯ

Waves of Karnataka


 ಮುಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದಾಗಿ 25 ಮಂದಿ ಸಾವನ್ನಪ್ಪಿದ್ದು, ಅವರಿಗೆ ತುರ್ತು ಪರಿಹಾರ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಮಳೆಯಿಂದಾಗಿ 84 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2,077ಮನೆಗಳು ಭಾಗಶಃ ಹಾನಿಗೀಡಾಗಿವೆ. ಪೂರ್ತಿ ಮನೆಗೆ 1.20 ಲಕ್ಷ ರೂ. ಪರಿಹಾರ ಹಾಗೂ ಮನೆ ನಿರ್ಮಿಸಿ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ಮುಂಗಾರು ಹಂಗಾಮಿನಲ್ಲಿ ಸೂಚಿಸಿರುವಂತೆ ರೂ.50 ಸಾವಿರದವರೆಗೆ ಪರಿಹಾರ ಒದಗಿಸಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಮಳೆ ಹಾನಿ ಕುರಿತು ಅಧಿಕಾರಿಗಳು ಮತ್ತು ಸಂಪುಟ ಸಹೋದ್ಯೋಗಿಗಳೊಂದಿಗಿನ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬೆಳೆ ಹಾನಿ ಕುರಿತು ಸ್ಥಳ ಪರಿಶೀಲನೆ ನಡೆಸಿದ ಆಧಾರದಲ್ಲಿ ಪ್ರಾಥಮಿಕ ವರದಿಯನ್ನು ಪಡೆಯಲಾಗಿದೆ. ಅತಿವೃಷ್ಟಿಯಿಂದಾಗಿ ಒಟ್ಟು 74,993 ಹೆಕ್ಟೇರ್‌ ಪ್ರದೇಶದಲ್ಲಿ ಅಂದಾಜು ಕೃಷಿ ಬೆಳೆ ಹಾನಿ, 30,941 ಹೆಕ್ಟೇರ್‌ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಹಾನಿ ಅಂದಾಜಿಸಲಾಗಿದೆ. ಒಟ್ಟು 1,05,937 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಅಂದಾಜಿಸಲಾಗಿದೆ ಎಂದು ವಿವರಿಸಿದರು.