ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ ಹಗರಣ) ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಟೇಶ್ ಮನೆ ಮೇಲೆ ನಿನ್ನೆ ಇಡಿ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆಗೆ ಒಳಪಡಿಸಿದ್ದರು. ಪ್ರಸ್ತುತ ನಟೇಶ್ ಅವರನ್ನು ವಶಕ್ಕೆ ಪಡೆದ ಇಡಿ ಅಧಿಕಾರಿಗಳು ಶಾಂತಿನಗರದ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ. ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ಕಚೇರಿಗೆ ಕರೆದೊಯ್ದಿದ್ದು ನಟೇಶ್ ಅವರನ್ನು ಬಂಧಿಸುವ ಸಾಧ್ಯತೆ ಇದೆ.
