ಬೆಂಗಳೂರು-ಅಯೋಧ್ಯೆ ವಿಮಾನಕ್ಕೆ ಬಾಂಬ್​ ಬೆದರಿಕೆ: ತುರ್ತು ಭೂಸ್ಪರ್ಶ

Waves of Karnataka


 ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಭಾನುವಾರ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಬೆಂಗಳೂರು - ಅಯೋಧ್ಯೆ ತುರ್ತು ಭೂಸ್ಪರ್ಶ ಮಾಡಿದೆ.

ಇಂದು ಬೆಂಗಳೂರಿನಿಂದ ಅಯೋಧ್ಯೆಗೆ ತೆರಳಿದ್ದ ಆಕಾಶ ಏರ್‌ಲೈನ್ಸ್ ವಿಮಾನ ಅಯೋಧ್ಯೆಯ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.

173 ಪ್ರಯಾಣಿಕರಿದ್ದ ಬೆಂಗಳೂರು - ಅಯೋಧ್ಯೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ವಿಮಾನ ಪರಿಶೀಲನೆ ಬಳಿಕ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಇದು ಹುಸಿಬಾಂಬ್‌ ಬೆದರಿಕೆ ಎಂದು ಅಯೋಧ್ಯೆ ಏರ್‌ಪೋರ್ಟ್ ನಿರ್ದೇಶಕ ವಿನೋದ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.