ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆರು ಮಂದಿ ಸಿಬ್ಬಂದಿಗೆ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
6 ಮಂದಿಗೂ ಒಂದೇ ದಿನ ಅಲ್ಲದೆ, ಬೇರೆ ಬೇರೆ ದಿನಾಂಕಗಳನ್ನು ನೀಡಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಬೆಂಗಳೂರಿನ ಇಡಿ ವಲಯ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂದು ತಿಳಿದುಬಂದಿದೆ.
ಸಮನ್ಸ್ ಪಡೆದ 6 ಮಂದಿ ನೌಕರರು ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ತಮ್ಮೊಂದಿಗೆ ತರುವಂತೆ ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ
