ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ಮರಿಗೌಡ ಇಂದು ಜಾರಿ ನಿರ್ದೇಶನಾಲಯದ (ED) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಶಾಂತಿನಗರದಲ್ಲಿರುವ ಕೇಂದ್ರೀಯ ಸಂಸ್ಥೆಯ ಕಚೇರಿಗೆ ಆಗಮಿಸಿದ ಮರಿಗೌಡ ವಿಚಾರಣೆ ಎದುರಿಸುತ್ತಿದ್ದಾರೆ. ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಎಎಸ್ ಅಧಿಕಾರಿ, ರಾಯಚೂರು ಕಾಂಗ್ರೆಸ್ ಸಂಸದ ಜಿ ಕುಮಾರ್ ನಾಯ್ಕ್ ಮತ್ತು ಸಿದ್ದರಾಮಯ್ಯ ಅವರ ಆಪ್ತ ಸಹಾಯಕ ಸಿ ಟಿ ಕುಮಾರ್ ಅವರನ್ನು ಬುಧವಾರ ಇಡಿ ಅಧಿಕಾರಿಗಳು ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.
