ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಕಾನೂನಿಗೆ ಗೌರವ ಕೊಟ್ಟು ಲೋಕಾಯುಕ್ತ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಪಾದಿಸಿದ್ದಾರೆ.
ಮುಡಾದಿಂದ 14 ನಿವೇಶನ ಹಂಚಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಆರೋಪ ಎದುರಿಸುತ್ತಿದ್ದು, ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ನಂಬರ್ 1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಸುಮಾರು ಎರಡು ಗಂಟೆಗಳ ಕಾಲ ವಿಚಾರಣೆ ಎದುರಿಸುತ್ತಿದ್ದಾರೆ.
ಮುಖ್ಯಮಂತ್ರಿಯಾಗಿ ಅವರು (ಸಿದ್ದರಾಮಯ್ಯ) ಕಾನೂನನ್ನು ಗೌರವಿಸಿದ್ದಾರೆ ಮತ್ತು ಪಾಲಿಸಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ
