ವಕ್ಫ್ ಮಂಡಳಿಯ ಅಕ್ರಮಗಳ ಬಗ್ಗೆ ಜಾರಿ ನಿರ್ದೇಶನಾಲಯ (ED) ಮತ್ತು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.
ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ, 1974ರ ವಕ್ಫ್ ಆಸ್ತಿ ಗೆಜೆಟ್ ನೋಟಿಫಿಕೇಶನ್ ಹಿಂಪಡೆಯಲು ಹಾಗೂ ಅಧಿಕಾರ ದುರುಪಯೋಗ ಆರೋಪದ ಕುರಿತು ಸಿಬಿಐ ತನಿಖೆಗೆ ಆಗ್ರಹಿಸಿ ನವೆಂಬರ್ 4ರಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದರು
