ಬಾಯಿಗೆ ಬಂದಂತೆ ಮಾತನಾಡಿದ್ರೆ ಕೇಳಿಸಿಕೊಳ್ಳಲು ಸಿದ್ಧರಿಲ್ಲ, ಚರ್ಚೆಗೆ ಬನ್ನಿ: ಚಲುವರಾಯಸ್ವಾಮಿ ಕುಮಾರಸ್ವಾಮಿಗೆ ಸವಾಲು

Waves of Karnataka


 ಬಾಯಿಗೆ ಬಂದಂತೆ ಮಾತನಾಡಿದರೆ ಕೇಳಿಸಿಕೊಳ್ಳೇಕೆ ನಾವು ಸಿದ್ಧರಿಲ್ಲ, ಸ್ನೇಹಿತರನ್ನು ಬಿಟ್ಟು ಜೆಡಿಎಸ್ ಪಕ್ಷ ಈಗ ಕುಟುಂಬದ ಪಕ್ಷವಾಗಿದೆ. ಇತಿಹಾಸದ ಚರ್ಚೆ ಅವಶ್ಯಕತೆ ಇದ್ದರೆ ಆಹ್ವಾನ ಕೊಡುತ್ತೇನೆ, ವೇದಿಕೆ ಸಿದ್ದಪಡಿಸಲಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಸಚಿವ ಚಲುವರಾಯಸ್ವಾಮಿ ಅವರು ಸವಾಲು ಹಾಕಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಮೀರ್ ಹಾಗೂ ಆ ನಾಲ್ವರ ಜೊತೆ ಇದ್ದಿದ್ದು ನನ್ನ ಕರಾಳ ದಿನ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದರು.

ನನಗೆ ಕುಮಾರಸ್ವಾಮಿಯಂತೆ ಮಾಧ್ಯಮದವರ ಮುಂದೆ ನಾಲಗೆ ಹರಿಬಿಡಲು ಸಾಧ್ಯವಿಲ್ಲ. ಅವರು ಚರ್ಚೆಗೆ ಬರುವುದಾದರೆ ಒಂದು ವೇದಿಕೆ ಸಿದ್ಧಮಾಡಿ. ಯಾರು ಹೊಲಸು, ಕಚಡ ಎಂದು ಚರ್ಚೆ ಮಾಡೋಣ. 20 ವರ್ಷ ಅವರ ಜತೆ ಇದ್ದೆವು, ಯಾರು ಸ್ನೇಹ ಬಿಟ್ಟರು ಎಂದು ಚರ್ಚಿಸೋಣ. ಸ್ನೇಹಿತರಿಂದಲೇ ಸಿಎಂ ಆದೇ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದರು. ಆಗ ಅದು ಕರಾಳದಿನ ಆಗಿರಲಿಲ್ಲವಾ? ಅಷ್ಟು ದಿನ ಏಕೆ ಕೊಳಚೆ ವಾಸನೆ ಕುಡಿದಿದ್ದರು? ಎಂದು ಪ್ರಶ್ನಿಸಿದರು