ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಕನ್ನಡ ಸುದ್ದಿ ಪೋರ್ಟಲ್ ಗಳ ಸಂಪಾದಕರ ವಿರುದ್ಧ ಕೇಸು ದಾಖಲು

Waves of Karnataka


 ರೈತನ ಆತ್ಮಹತ್ಯೆಗೂ ವಕ್ಫ್‌ ಬೋರ್ಡ್‌ನ ಭೂವಿವಾದಕ್ಕೂ ಸಂಬಂಧ ಕಲ್ಪಿಸಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಕೆಲವು ಕನ್ನಡ ನ್ಯೂಸ್‌ ಪೋರ್ಟಲ್‌ಗಳ ಸಂಪಾದಕರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ನಿನ್ನೆ ತಮ್ಮ ಎಕ್ಸ್ ಖಾತೆಯಲ್ಲಿ ಸುದ್ದಿ ಪೋರ್ಟಲ್‌ಗಳ ಸುದ್ದಿಯನ್ನು ಹಂಚಿಕೊಂಡ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಹಾವೇರಿ ಜಿಲ್ಲೆಯ ರೈತರೊಬ್ಬರು ತಮ್ಮ ಭೂಮಿಯನ್ನು ವಕ್ಪ್ ಮಂಡಳಿ ಸ್ವಾಧೀನಪಡಿಸಿಕೊಂಡಿದ್ದಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಅಲ್ಪಸಂಖ್ಯಾತ ವರ್ಗದವರನ್ನು ಖುಷಿಪಡಿಸುವ ತರಾತುರಿಯಲ್ಲಿ, ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಕರ್ನಾಟಕದಲ್ಲಿ ದುರಂತ ತಂದೊಡ್ಡಿದ್ದಾರೆ. ದಿನಗಳೆದಂತೆ ರೈತರು, ಹಿಂದೂಗಳ ಬದುಕು ದುಸ್ತರವಾಗುತ್ತಿದೆ ಎಂದು ತೇಜಸ್ವಿ ಸೂರ್ಯ ಆರೋಪಿಸಿದ್ದರು.