ಸಚಿವ ಈಶ್ವರ ಖಂಡ್ರೆ ಟಾಕ್ಸಿಕ್'ಚಿತ್ರತಂಡ ವಿರುದ್ಧ ಎಫ್ಐಆರ್: ಬಗ್ಗೆ ಹೇಳಿದ್ದೇನೂ

Waves of Karnataka


 ರಾಕಿಂಗ್ ಸ್ಟಾರ್ ಯಶ್‌ ನಟನೆಯ ಮುಂಬರುವ ಬಹುನಿರೀಕ್ಷಿತ ಚಿತ್ರ ʼಟಾಕ್ಸಿಕ್‌ʼ ಸಿನಿಮಾ ತಂಡಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಹೆಚ್ ಎಂಟಿ ಕಾರ್ಖಾನೆ ಬಳಿ ಬೃಹತ್ ಸೆಟ್ ನಿರ್ಮಾಣ ಮಾಡಿ ತಿಂಗಳುಗಳ ಕಾಲ ಸಿನಿಮಾದ ಶೂಟಿಂಗ್ ಮಾಡಲಾಗಿತ್ತು. ಆದರೆ ಸಿನಿಮಾ ತಂಡ, ಸೆಟ್ ನಿರ್ಮಾಣ ಮಾಡಲು ಮರಗಳನ್ನು ಕಡಿದು ನಾಶ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು.


ಮರಗಳನ್ನು ಕಡಿದ ಆರೋಪದಲ್ಲಿ ನ್ಯಾಯಾಲಯದ ಸೂಚನೆಯಂತೆ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣ ಸಂಸ್ಥೆಗಳಾದ ಕೆವಿಎನ್ ಹಾಗೂ ಯಶ್ರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.


ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಹಾಗೂ ಹೆಚ್ಎಂಟಿ ಲಿಮಿಟೆಡ್ ವಿರುದ್ಧವೂ ಸಹ ಎಫ್ಐಆರ್ ದಾಖಲಾಗಿದೆ. ಅರಣ್ಯ ಕಾಯ್ದೆಯ ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಆರೋಪಿಗಳಿಗೆ ನೊಟೀಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.