ಸಿದ್ದರಾಮಯ್ಯಗೆ ಮತ್ತೆ MUDA ಸಂಕಷ್ಟ: ಪತ್ನಿ, ಭಾವ, ಸಿಬಿಐ, ಇತರರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ!

Waves of Karnataka


 ಮುಡಾ ಹಗರಣ (MUDA scam)ಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಮಾತ್ರವಲ್ಲದೇ ಅವರ ಭಾವ ಮಲ್ಲಿಕಾರ್ಜುನ ಸ್ವಾಮಿ, ಕೇಂದ್ರ ಸರ್ಕಾರ, ಕೇಂದ್ರ ತನಿಖಾ ದಳ (ಸಿಬಿಐ), ರಾಜ್ಯ ಸರ್ಕಾರ, ರಾಜ್ಯ ಪೊಲೀಸ್ ಮುಖ್ಯಸ್ಥರು, ಲೋಕಾಯುಕ್ತ ಪೊಲೀಸರು ಮತ್ತು ಇತರರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ಸ್ವತಂತ್ರ, ನ್ಯಾಯಸಮ್ಮತ, ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಲೋಕಾಯುಕ್ತ ಪೊಲೀಸರಿಂದ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ನಿರ್ದೇಶನ ನೀಡುವಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ಹೈಕೋರ್ಟ್ ಈ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.