ADR ವರದಿ /ದೇಶದ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಸಿದ್ದರಾಮಯ್ಯನವರದು ಎಷ್ಟನೇ ಸ್ಥಾನ?ನೀವೇ ನೋಡಿ

Waves of Karnataka


 ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್ ಬಿಡುಗಡೆ ಮಾಡಿರುವ ವರದಿಯಲ್ಲಿ ಭಾರತದ ತಲಾ ನಿವ್ವಳ ರಾಷ್ಟ್ರೀಯ ಆದಾಯವು 2023-24ರಲ್ಲಿ ಸರಾಸರಿ 1,85,854 ಎಂದು ಅಂದಾಜಿಸಲಾಗಿದೆ. ಮುಖ್ಯಮಂತ್ರಿಗಳ ಸರಾಸರಿ ತಲಾ ಆದಾಯ 13,64,310 ರೂ.ಗಳಾಗಿದ್ದು, ದೇಶದ ನಾಗರಿಕರ ತಲಾ ಆದಾಯಕ್ಕಿಂತ ಶೇ.7.3 ಪಟ್ಟು ಹೆಚ್ಚಳವಾಗಿದೆ.

ದೇಶದ 31 ಮುಖ್ಯಮಂತ್ರಿಗಳ ಒಟ್ಟು ಆದಾಯ 1,630 ಕೋಟಿ ರೂ.ಗಳಷ್ಟಿದೆ ಎಂದು ವರದಿ ಹೇಳಿದೆ. ದೇಶದ ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಸರಾಸರಿ ಆಸ್ತಿ ಮೌಲ್ಯ 52.59 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ದೇಶದ ಶ್ರೀಮಂತ ಮುಖ್ಯಮಂತ್ರಿಗಳ ಕುರಿತು ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್  ಬಿಡುಗಡೆ ಮಾಡಿರುವ ವರದಿಯಲ್ಲಿ ಬೆಳಕಿಗೆ ಬಂದಿದೆ.

ಒಟ್ಟು 931 ಕೋಟಿ ರೂ. ಮೌಲ್ಯದ ಸಂಪತ್ತು ಹೊಂದಿರುವ ಆಂದ್ರಪ್ರದೇಶದ ಚಂದ್ರಬಾಬು ನಾಯ್ಡು ಅಗ್ರಸ್ಥಾನದಲ್ಲಿ ಇದ್ದಾರೆ. ಆಸ್ತಿ ಮೌಲ್ಯ ಒಟ್ಟು 332 ಕೋಟಿ ರೂ ಹೊಂದಿರುವ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೇಮಾ ಖಂಡು ಎರಡನೇ ಸ್ಥಾನದಲ್ಲಿದ್ದಾರೆ .ಒಟ್ಟು ಮೌಲ್ಯ ಆಸ್ತಿ 51 ಕೋಟಿ ರೂ. ಹೊಂದಿರುವ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರನೇ ಸ್ಥಾನದಲ್ಲಿದ್ದಾರೆ


ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಈ ಮೂಲಕ ದೇಶದ ಬಡ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ