ಮುಡಾ ನಿವೇಶನಗಳ ಹಂಚಿಕೆ ಪ್ರಕರಣವನ್ನು ಹಿಂಪಡೆಯಲು ತನಗೆ ಹಣದ ಆಮಿಷ ಒಡ್ಡಲಾಗುತ್ತಿದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ

Waves of Karnataka


 ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ವಿರುದ್ಧ ಕೇಳಿಬಂದಿರುವ ಮುಡಾ ನಿವೇಶನಗಳ ಹಂಚಿಕೆ ಪ್ರಕರಣವನ್ನು ಹಿಂಪಡೆಯಲು ತನಗೆ ಹಣದ ಆಮಿಷ ಒಡ್ಡಲಾಗುತ್ತಿದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದು, ಈ ಸಂಬಂಧ ಲೋಕಾಯುಕ್ತರಿಗೆ ದೂರು ದಾಖಲಿಸಿದ್ದಾರೆ

ಹೌದು.. 'ಮುಡಾ ನಿವೇಶನಗಳ ಹಂಚಿಕೆ ಪ್ರಕರಣವನ್ನು ಸಿಬಿಐ‌ ತನಿಖೆಗೆ ಕೋರಿ ನ್ಯಾಯಾಲಯದಲ್ಲಿ ನಾನು ಸಲ್ಲಿಸಿರುವ ಅರ್ಜಿ ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರ ಕಡೆಯವರು ಎಂದು ಹೇಳಿಕೊಂಡು ಕೆಲವರು ನನಗೆ ಹಾಗೂ ನನ್ನ ಕುಟುಂಬಕ್ಕೆ ಹಣದ ಆಮಿಷ ಒಡ್ಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದು, ಈ ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು' ಎಂದು ಮೈಸೂರಿನ ಲೋಕಾಯುಕ್ತ ಎಸ್.ಪಿ. ಕಚೇರಿಗೆ ದೂರು ಸಲ್ಲಿಸಿದ್ದಾರೆ.