ಅತ್ಯಂತ ವಿಶಿಷ್ಟವಾದ ಹವ್ಯಕ ಭಾಷೆ ಉಳಿಯಬೇಕು. ಈ ಭಾಷೆ ಉಳಿಯುವ ನಿಟ್ಟಿನಲ್ಲಿ ನಾನು ನಿಮ್ಮೊಂದಿಗೆ ಇರುತ್ತೇನೆ' ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹವ್ಯಕ ಸಮಾಜಕ್ಕೆ ಭರವಸೆ ನೀಡಿದರು.
ಅರಮನೆ ಮೈದಾನದಲ್ಲಿ ಮೂರು ದಿನಗಳ ಕಾಲ ಆಯೋಜಿಸಿದ್ದ ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಸಮಾರೋಪ ಕಾರ್ಯಕ್ರಮದಲ್ಲಿ ಭಾನುವಾರ ಪಾಲ್ಗೊಂಡು ಮಾತನಾಡಿ, ಹವ್ಯಕ ಭಾಷೆ ಅಭಿವೃದ್ಧಿಗೆ ಪ್ರತ್ಯೇಕ ಆಕಾಡೆಮಿ, ವಿಶ್ವವಿದ್ಯಾಲಯ ಹಾಗೂ ಅಧ್ಯಯನ ಕೇಂದ್ರ ಸ್ಥಾಪನೆಯಾಗಬೇಕು. ಅಂತಹ ಎಲ್ಲಾ ಪ್ರಯತ್ನಗಳಿಗೆ ನನ್ನ ಬೆಂಬಲ ಇದೆ ಎಂದು ಅವರು ಭರವಸೆ ನೀಡಿದರು
