ವಿಯೆಟ್ನಾಂನಲ್ಲಿ ರಾಹುಲ್ ಗಾಂಧಿಹೊಸ ವರ್ಷ ಆಚರಿಸಿದ್ರೆ ನಿಮಗೇನು ಸಮಸ್ಯೆ?'

Waves of Karnataka


 ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ, ರಾಹುಲ್ ಗಾಂಧಿ ಅವರು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಸಾವನ್ನು ತಮ್ಮ ರಾಜಕೀಯಕ್ಕೆ ದುರ್ಬಳಕೆ ಮಾಡಿಕೊಂಡಿದ್ದಾರೆ ಮತ್ತು ಅವರ ನಿಧನದ ಹಿನ್ನೆಲೆಯಲ್ಲಿದೇಶ ಶೋಕಾಚರಣೆಯಲ್ಲಿರುವಾಗ ಹೊಸ ವರ್ಷವನ್ನು ಆಚರಿಸಲು ವಿಯೆಟ್ನಾಂಗೆ ಹಾರಿದ್ದಾರೆ ಎಂದು ಸೋಮವಾರ ಆರೋಪಿಸಿದೆ.

ಇಂತಹ ವಿಷಯಾಂತರ ರಾಜಕೀಯವನ್ನು ಸಂಘಿಗಳು ಯಾವಾಗ ನಿಲ್ಲಿಸುತ್ತಾರೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.

"ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಶೋಕಾಚರಣೆಯಲ್ಲಿರುವಾಗ, ರಾಹುಲ್ ಗಾಂಧಿ ಅವರು ಹೊಸ ವರ್ಷವನ್ನು ಆಚರಿಸಲು ವಿಯೆಟ್ನಾಂಗೆ ಹಾರಿದ್ದಾರೆ" ಎಂದು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ