ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅವಹೇನಕಾರಿ ಹೇಳಿಕೆ ಖಂಡಿಸಿ ಗುರುವಾರ ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಸದಸ್ಯ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಕೇಳಿಬಂದಿದೆ.
ಇಂದು ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಅವಧಿ ಮುಗಿದ ನಂತರ ಶೂನ್ಯ ವೇಳೆಯಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಆಡಳಿತ ಸದಸ್ಯರು ಧರಣಿಗೆ ಮುಂದಾದರು. ಕೂಡಲೇ ಅಮಿತ್ ಶಾ ಅವರನ್ನು ಬಂಧಿಸಿ, ರಾಜೀನಾಮೆ ಪಡೆಯುವಂತೆ ಕಾಂಗ್ರೆಸ್ ಸದಸ್ಯರು ಆಗ್ರಹಿಸಿದರು.
ಇದೇ ವೇಳೆ, ಬಿಜೆಪಿ ಸದಸ್ಯರು ಕೂಡ ಅಂಬೇಡ್ಕರ್ ಭಾವಚಿತ್ರ ಹಿಡಿದು ಅವರಿಗೆ ಅಪಮಾನ ಮಾಡಿದ್ದು ಕಾಂಗ್ರೆಸ್. ಅಂಬೇಡ್ಕರ್ ಅವರಿಗೆ ಭಾರತ ರತ್ನವನ್ನೂ ಅವರು ನೀಡಲಿಲ್ಲ ಎಂದು ಹರಿಹಾಯ್ದರು.
