ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಆರೋಪದಲ್ಲಿ ಪೊಲೀಸರಿಂದ ಬಂಧಿತರಾಗಿದ್ದ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ.
ಈ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಬಿಜೆಪಿ ನಾಯಕರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಸಿ.ಟಿ. ರವಿ ನನ್ನಗೆ ಹೈಕೋರ್ಟ್ ಜಾಮೀನು ನೀಡಿರುವುದು ಸತ್ಯಕ್ಕೆ ಸಿಕ್ಕ ಜಯವಾಗಿದೆ. ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ಬಳಸಿಕೊಂಡು ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ. ಕಾನೂನು ಪಾಲಿಸುವ ಪೊಲೀಸರೇ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.
ನಿನ್ನೆ ಅನುಭವಿಸಿದ ಸಂಕಷ್ಟವನ್ನು 35 ವರ್ಷಗಳ ಹಿಂದೆಯೇ ಅನುಭವಿಸಿದ್ದೆ. ಇದೆಲ್ಲಾ ಹೊಸತಲ್ಲಾ. ಇಂತಹ ಸಂಕಷ್ಟದ ಸಂದರ್ಭದಲ್ಲಿ ನನ್ನ ಪರ ನಿಂತ ಪಕ್ಷದ ಶಾಸಕರು, ಸಂಸದರು ಹಾಗೂ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.
