ರಾಯಚೂರಿನ ಜುಲಮಗೇರಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು 27 ವರ್ಷದ ದುಳಮ್ಮ ಎಂದು ಗುರುತಿಸಲಾಗಿದೆ. ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಮಾವನನ್ನು ಸಂತುಳ್ಳ ರಾಮಲಿಂಗಯ್ಯ ಕುಂಡಫಾಲಯ್ಯ ಎನ್ನಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ ಮಾವ ರಾಮಲಿಂಗಯ್ಯನಿಗೆ ಮೊದಲಿನಿಂದಲೂ ಸೊಸೆ ಮೇಲೆ ಕಣ್ಣಿತ್ತು. ಈ ಹಿಂದೆ ಎರಡ್ಮೂರು ಬಾರಿ ಸೊಸೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ವಿಚಾರ ಕುಟುಂಬಸ್ಥರಿಗೆ ಮತ್ತು ಗ್ರಾಮಸ್ಥರಿಗೆ ತಿಳಿದು ಗ್ರಾಮದ ಹಿರಿಯರು, ಕುಟುಂಬಸ್ಥರು ರಾಮಲಿಂಗಯ್ಯಗೆ ಬೈದು ಬುದ್ಧಿ ಹೇಳಿದ್ದರು.
ಆಗ ಸುಮ್ಮನ್ನಿದ್ದ ರಾಮಲಿಂಗಯ್ಯ ಸಮಯಕ್ಕಾಗಿ ಕಾಯುತ್ತಿದ್ದ. ಹಿಂದಿನ ಘಟನೆಯಿಂದ ಬುದ್ಧಿ ಕಲಿಯದ ಕಾಮುಕ ಮಾವ ರಾಮಲಿಂಗಯ್ಯ, ಮನೆಯಲ್ಲಿ ಯಾರು ಇಲ್ಲದ ವೇಳೆ ಮತ್ತೆ ಸೊಸೆ ದುಳ್ಳಮ್ಮನ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದಾನೆ. ಇದಕ್ಕೆ ಸೊಸೆ ದುಳಮ್ಮ ನಿರಾಕರಿಸಿದಾಗ ಆಕೆಯ ತಲೆಗೆ ಸಲಾಕೆಯಿಂದ ಬಲವಾಗಿ ಹೊಡೆದು ಆಕೆ ಸತ್ತ ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ.
