ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆಗೆ ಕಡಿವಾಣ ಹಾಕಲು ಮುಂದಿನ ತಿಂಗಳು ಹೊಸ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Waves of Karnataka


 ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆಗೆ ಕಡಿವಾಣ ಹಾಕಲು ಮುಂದಿನ ತಿಂಗಳು ಹೊಸ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ವಿಧಾನಪರಿಷತ್ತಿನಲ್ಲಿ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಜಗದೇವ್ ಗುತ್ತೇದಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿರುವುದನ್ನು ಒಪ್ಪಿಕೊಂಡರು. 2021-22 ರಲ್ಲಿ ಶೇ. 35 ರಷ್ಟಿದ್ದ ಸಿಸೇರಿಯನ್ ಹೆರಿಗೆ 2022-23ರಲ್ಲಿ ಶೇ.38ಕ್ಕೆ ಹೆಚ್ಚಾಗಿದೆ. ಪ್ರಸ್ತುತ ರಾಜ್ಯದಲ್ಲಿ ಇದು ಶೇ. 46 ರಷ್ಟಿದ್ದು, ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಅದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸಿಸೇರಿಯನ್ ಹೆರಿಗೆ ಸುಲಭವಾಗಿದ್ದು, ಹೆಚ್ಚಿನ ಆದಾಯ ತರುವುದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 61 ರಷ್ಟು ಈ ಹೆರಿಗೆಯನ್ನೆ ಮಾಡಲಾಗುತ್ತದೆ. ತಾಯಿ ಹಾಗೂ ಮಗುವಿನ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಇದನ್ನು ರದ್ದು ಮಾಡುವುದು ಅಗತ್ಯವಾಗಿದೆ. ಸಹಜ ಹೆರಿಗೆಗೆ ಬಾಣಂತಿಯರು ಮಾನಸಿಕ ಹಾಗೂ ದೈಹಿಕವಾಗಿ ಸಿದ್ಧರಿರಬೇಕಾದ ಅಗತ್ಯವಿದೆ. ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಶೇ.80-90 ರಷ್ಟು ಸಿಸೇರಿಯನ್ ಹೆರಿಗೆ ಮಾಡುತ್ತಿದ್ದು, ಮುಂದಿನ ತಿಂಗಳು ಹೊಸ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದರು.