ಸಚಿವ ಪ್ರಿಯಾಂಕ್ ಖರ್ಗೆ ಆಪ್ತ, ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್‌ ರಾಜು ಕಪನೂರು ವಿರುದ್ಧ ಹಣಕ್ಕೆ ಬೇಡಿಕೆ,

Waves of Karnataka


 ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ, ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್‌ ರಾಜು ಕಪನೂರು ವಿರುದ್ಧ ಹಣಕ್ಕೆ ಬೇಡಿಕೆ, ಕೊಲೆ ಬೆದರಿಕೆಯಂತ ಗಂಭೀರ ಆರೋಪಗಳನ್ನು ಮಾಡಿ ಗುತ್ತಿಗೆದಾರನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. 26 ವರ್ಷದ ಸಚಿನ್ 7 ಪುಟಗಳ ಡೆತ್ನೋಟ್ ಬರೆದಿಟ್ಟು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಡೆತ್ ನೋಟ್ನಲ್ಲಿ ರಾಜು ಕಪನೂರು ವಿರುದ್ಧ ಹಣಕ್ಕೆ ಬೇಡಿಕೆ, ಕೊಲೆ ಬೆದರಿಕೆ ಆರೋಪ ಮಾಡಿದ್ದಾರೆ. 15 ಲಕ್ಷ ರೂಪಾಯಿ ಹಣ ಪಡೆದು ಟೆಂಡರ್ ನೀಡದೆ ವಂಚನೆ ಮಾಡಿದ್ದು, ಅಲ್ಲದೆ 1 ಕೋಟಿ ರೂಪಾಯಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದು ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಚಿನ್ ಆರೋಪಿಸಿದ್ದಾನೆ. ಸದ್ಯ ಪೊಲೀಸರು ಸಚಿನ್ ಮೃತದೇಹವನ್ನು ಬ್ರಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಈ ಸಂಬಂಧ ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.