ಬಸ್‌ ದರ ಏರಿಕೆ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಸರಕಾರದ ವಿರುದ್ಧ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು

Waves of Karnataka


 ಪುರುಷ ಹಿರಿಯ ಪ್ರಯಾಣಿಕರನ್ನು ಸನ್ಮಾನಿಸುವ ಮೂಲಕ ಬಸ್‌ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಸರಕಾರದ ವಿರುದ್ಧ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಭಾನುವಾರ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿ, ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ರಾಮನಗರದಿಂದ ಚನ್ನಪಟ್ಟಣಕ್ಕೆ ತೆರಳಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ವಾಟಾಳ್‌ ನಾಗರಾಜು, 'ರಾಜ್ಯ ಸರಕಾರ ಈಗಾಗಲೇ ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಹಣ ನೀಡುತ್ತಿರುವಂತೆ, ಪುರುಷರಿಗೂ ಹಣ ನೀಡಬೇಕು. ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಂತೆ ಪುರುಷರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು. ಇಲ್ಲವೇ ಪ್ರಯಾಣ ದರ ಕಡಿಮೆ ಮಾಡಬೇಕು' ಎಂದು ಒತ್ತಾಯಿಸಿದರು.