ಹ್ಯೂಮನ್ ಮೆಟಾನ್ಯುಮೋ ವೈರಸ್ (HMPV) ಸೋಂಕಿನ ಬಗ್ಗೆ ಹೆಚ್ಚಿನ ಆತಂಕ ಪಡಬೇಕಿಲ್ಲ. ಮಾಸ್ಕ್ ಕಡ್ಡಾಯವಲ್ಲ. ಸಹಜ ಮುಂಜಾಗ್ರತೆ ವಹಿಸಿದರೆ ಸಾಕು. ಬೆಂಗಳೂರಿನಲ್ಲಿ ಸೋಂಕು ತಗುಲಿದ್ದ ಮಕ್ಕಳ ಆರೋಗ್ಯ ಸ್ಥಿತಿ ಸುಧಾರಿಸಿದೆ " ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು
ರಾಜಧಾನಿ ಬೆಂಗಳೂರಿನಲ್ಲಿ 2 ಎಚ್‌ಎಂಪಿವಿ ಕೇಸ್ ಪತ್ತೆಯಾಗಿದೆ. ಈ ಹಿನ್ನೆಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಮಾತನಾಡಿದ ಸಚಿವರು, " ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 8 ತಿಂಗಳು, 3 ತಿಂಗಳ ಇಬ್ಬರು ಮಕ್ಕಳಲ್ಲಿ ಕಾಯಿಲೆ ದೃಢಪಟ್ಟಿದೆ. ಸದ್ಯ ಇಬ್ಬರ ಆರೋಗ್ಯ ಸುಧಾರಿಸಿದೆ. ಆತಂಕ ಪಡುವ ಸ್ಥಿತಿ ಇಲ್ಲ " ಎಂದು ಹೇಳಿದರು
